ರಾಹುಲ್ ಗಾಂಧಿ
ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಲಾಗಿದೆ.
ಸಂಸದರು/ಶಾಸಕರ ನ್ಯಾಯಾಲಯದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮಂಗಳವಾರ ಪಟ್ಟಿ ಮಾಡಲಾಗಿತ್ತು. ಆದರೆ, ಸಂಬಂಧಪಟ್ಟ ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ಜೂನ್ 26ಕ್ಕೆ ಮುಂದೂಡಲಾಯಿತು ಎಂದು ಅರ್ಜಿದಾರರ ಪರ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.
2018ರ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕೀಯದಲ್ಲಿ ನಂಬಿಕೆ ಹೊಂದಿರುವುದಾಗಿ ಬಿಜೆಪಿ ಹೇಳಿಕೊಂಡಿದೆ. ಆದರೆ, ಬಿಜೆಪಿ ಅಧ್ಯಕ್ಷರೇ ಕೊಲೆ ಪ್ರಕರಣದ ’ಆರೋಪಿ‘ ಆಗಿದ್ದಾರೆ’ ಎಂದು ರಾಹುಲ್ ಹೇಳಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಆ ಸಂದರ್ಭದಲ್ಲಿ ಅಮಿತ್ ಶಾ ಬಿಜೆಪಿಯ ಅಧ್ಯಕ್ಷರಾಗಿದ್ದರು.
ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ, ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.