ವಿ.ಎಸ್.ಅಚ್ಚುತಾನಂದನ್
ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ)ನ ಹಿರಿಯ ಮುಖಂಡ ವಿ.ಎಸ್.ಅಚ್ಚುತಾನಂದನ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾತಾಯುಷಿಯಾದ ಅಚ್ಯುತಾನಂದನ್ (101) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಚ್ಯುತಾನಂದನ್ ಅವರ ಆರೋಗ್ಯ ವಿಚಾರಿಸಿದರು. ಹಿರಿಯ ನಾಯಕನ ಆರೋಗ್ಯ ಕುರಿತು ಹೃದ್ರೋಗ ತಜ್ಞರ ತಂಡ ನಿಗಾ ವಹಿಸಿದೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.
ಕೇರಳದ ರಾಜಕೀಯದಲ್ಲಿ ಮೇರು ವ್ಯಕ್ತಿಯಾದ ಅಚ್ಯುತಾನಂದನ್ ಅವರು ಕಳೆದ ಕೆಲ ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಏಳು ಬಾರಿ ಶಾಸಕರಾದ ಅಚ್ಯುತಾನಂದನ್, 2006ರಿಂದ 2011ರವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ತಮ್ಮ ರಾಜಕೀಯ ಬದುಕಿನಲ್ಲಿ ಅವರು 10 ಚುನಾವಣೆಗಳನ್ನು ಎದುರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.