
ತಿರುವನಂತಪುರ: ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಯ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಜಿಲ್ಲೆಯಲ್ಲಿ ಗುರುವಾರ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಮೇ10 ರವರೆಗೆ ರಾಜ್ಯದ ತ್ರಿಶ್ಶೂರ್ ಮತ್ತು ಪಾಲಕ್ಕಾಡ್ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಹಾಗೂ ಅಲಪ್ಪುಳದಲ್ಲಿ 38, ಕೊಲ್ಲಂ, ಕೊಟ್ಟಾಯಂ, ಪತ್ತನಂತಿಟ್ಟ, ಎರ್ನಾಕುಲಂ, ಕೋಯಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ 37, ತಿರುವನಂತಪುರ, ಮಲಪ್ಪುರಂ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ 36 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಮುಂದುವರೆಯಲಿದೆ.
ಇದು ಸಾಮಾನ್ಯವಾಗಿ ಈ ಪ್ರದೇಶಗಳಲ್ಲಿ ಈ ಸಮಯದಲ್ಲಿ ದಾಖಲಾಗುವ ತಾಪಮಾನಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ. ಗುಡ್ಡಗಾಡು ಪ್ರದೇಶಗಳನ್ನು ಹೊರತುಪಡಿಸಿ ಈ ಜಿಲ್ಲೆಗಳಲ್ಲಿ ಹೆಚ್ಚಿನ ಬಿಸಿ ಮತ್ತು ಆರ್ದ್ರ ವಾತಾವರಣವು ಅಧಿಕವಾಗಿರಲಿದೆ ಎಂದು ಐಎಮ್‌ಡಿ ತಿಳಿಸಿದೆ.
ಮೇ9 ರಂದು ಅಲಪ್ಪುಳ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿಸಿಗಾಳಿ ಸಾಧ್ಯತೆ ಇದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ ಎಂದಿದೆ.
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಉತ್ತಮ ಮಳೆಯಾಗಿದೆ. ವಿದರ್ಭ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
40 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಹೆಚ್ಚು ತಾಪಮಾನವಿದ್ದ ವಿದರ್ಭ ಪ್ರದೇಶವು ಇದೀಗ ಮಳೆಯಿಂದ ತಂಪಾಗಿದೆ. ಪೂರ್ವ ವಿದರ್ಭ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ನಾಗ್ಪುರದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಸಹಿತ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಬದಲಾವಣೆ ಅಂಟಾರ್ಕ್ಟಿಕಾ ಖಂಡದ ಮೇಲೆ ಪರಿಣಾಮ ಬೀರುತ್ತಿದೆ. ಮುಂದಿನ ವರ್ಷಗಳಲ್ಲಿ ತಾಪಮಾನ ಏರಿಕೆಯಿಂದ ಹಿಮ ಕುಸಿದು ಸಮುದ್ರಮಟ್ಟ ಏರಿಕೆಯಾಗಬಹುದು– ತಂಬನ್ ಮೆಲೋತ್ ಹಿರಿಯ ವಿಜ್ಞಾನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.