ADVERTISEMENT

ದೆಹಲಿ ರಾಮಲೀಲಾ ಮೈದಾನದಲ್ಲಿ ‘ಇಂಡಿಯಾ’ ರ್‍ಯಾಲಿ: ಬಿಗಿ ಭದ್ರತೆ

ಪಿಟಿಐ
Published 31 ಮಾರ್ಚ್ 2024, 4:58 IST
Last Updated 31 ಮಾರ್ಚ್ 2024, 4:58 IST
   

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ವಿಪಕ್ಷಗಳ ವಿರುದ್ಧ ತನಿಖಾ ಸಂಸ್ಥೆಗಳ ದುರುಪಯೋಗ ಖಂಡಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ರ್‍ಯಾಲಿ ಹಮ್ಮಿಕೊಂಡಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಮೈದಾನದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

‘ಕೆಲವು ಷರತ್ತಿನ ಮೇಲೆ ರ್‍ಯಾಲಿಗೆ ಅನುಮತಿ ನೀಡಲಾಗಿದೆ. ರಾಮಲೀಲಾ ಮೈದಾನದಿಂದ ಯಾವುದೇ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ. ಟ್ರಾಕ್ಟರ್ ರ್‍ಯಾಲಿ, ಶಸ್ತ್ರಾಸ್ತ್ರಗಳ ಬಳಕೆಗೆ ಅನುಮತಿ ಇಲ್ಲ. ರಾಜಕೀಯ ಪಕ್ಷಗಳ ಕಚೇರಿಗಳು ಇರುವ ದೀನದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಮೈದಾನದ ಬಳಿ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ರ್‍ಯಾಲಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ವ್ಯವಸ್ಥೆ ಮಾಡಲಾಗಿದೆ. ಪ್ರವೇಶ ಮತ್ತು ನಿರ್ಗಮನಕ್ಕಾಗಿ ಮೈದಾನದಲ್ಲಿ ಏಳು ಗೇಟ್‌ಗಳನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ ಒಂದು ಗೇಟ್‌ ಅನ್ನು ವಿಐಪಿಗಳಿಗೆ, ಮತ್ತೊಂದನ್ನು ಮಾಧ್ಯಮಕ್ಕೆ ಮೀಸಲಿಡಲಾಗಿದೆ’ ಎಂದು ಹೇಳಿದರು.

ADVERTISEMENT

ಮೈದಾನ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೈದಾನದ ಒಳಗೆ ಬರುವವರನ್ನು ಪರಿಶೀಲಿಸಿ ಒಳಕ್ಕೆ ಬಿಡಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.