ADVERTISEMENT

ದೆಹಲಿಯಲ್ಲಿ ಭಾರೀ ಮಳೆ: ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2023, 2:18 IST
Last Updated 21 ಮಾರ್ಚ್ 2023, 2:18 IST
ಮಳೆ ಚಿತ್ರ
ಮಳೆ ಚಿತ್ರ   

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು ರೈಲು ಮತ್ತು ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ.

ರಾತ್ರಿ ವ್ಯಾಪಕವಾಗಿ ಮಳೆಯಾಗಿದ್ದು 15ಕ್ಕೂ ಹೆಚ್ಚು ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ದೆಹಲಿಗೆ ಬರುವ ಕೆಲವು ರೈಲುಗಳು ತಡವಾಗಿ ಬರಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. 7 ವಿಮಾನಗಳನ್ನು ಜೈಪುರಕ್ಕೆ, 3 ವಿಮಾನಗಳನ್ನು ಲಖನೌಗೆ ತೆರಳುವಂತೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.

ADVERTISEMENT

ಹಲವು ಪ್ರದೇಶಗಳಲ್ಲಿ ಸೋಮವಾರ ಹಗಲು ಮತ್ತು ರಾತ್ರಿ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಯಾವುದೇ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಕನಿಷ್ಠ ತಾಪಮಾನ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇನ್ನು ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.