ADVERTISEMENT

ಮಳೆ ಅಬ್ಬರ: ಮುಂಬೈ ತಲುಪಿದ ಎನ್‌ಡಿಆರ್‌ಎಫ್‌ ತಂಡ

ಪಿಟಿಐ
Published 22 ಜುಲೈ 2024, 5:19 IST
Last Updated 22 ಜುಲೈ 2024, 5:19 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಪಿಟಿಐ

ನವದೆಹಲಿ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರವೂ ಮಳೆ ಮುಂದುವರಿದಿದ್ದು, ಮುಂಜಾಗ್ರತ ಕ್ರಮವಾಗಿ ಎನ್‌ಡಿಆರ್‌ಎಫ್‌ನ ಮೂರು ತಂಡಗಳನ್ನು ಮುಂಬೈನಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 13.5 ಸೆಂ.ಮೀ, ಪೂರ್ವ ಮುಂಬೈನಲ್ಲಿ 15.4 ಸೆಂ.ಮೀ ಮತ್ತು ಪಶ್ಚಿಮ ಮುಂಬೈನಲ್ಲಿ 13.7 ಸೆಂ.ಮೀ ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಗರ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆ ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್‌ಡಿಆರ್‌ಎಫ್‌) ಮೂರು ತಂಡಗಳನ್ನು ಮುಂಬೈನಲ್ಲಿ ನಿಯೋಜಿಸಲಾಗಿದೆ.

ಸೋಮವಾರ ಬೆಳಿಗ್ಗೆಯಿಂದ ಸ್ಥಳೀಯ ರೈಲು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಪಶ್ಚಿಮ ರೈಲ್ವೆ ಇಲಾಖೆ ಹೇಳಿದೆ. ಅದಾಗ್ಯೂ, ರೈಲು ಸಂಚಾರದಲ್ಲಿ ವಿಳಂಬವಾಗುತ್ತಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

ಭಾನುವಾರ ಸುರಿದ ಮಹಾ ಮಳೆಗೆ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 36 ವಿಮಾನಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.