ADVERTISEMENT

ಮುಂಬೈನಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 7:25 IST
Last Updated 5 ಜುಲೈ 2022, 7:25 IST
ಸಾಂದರ್ಭಿಕ ಚಿತ್ರ –ಪಿಟಿಐ
ಸಾಂದರ್ಭಿಕ ಚಿತ್ರ –ಪಿಟಿಐ   

ಮುಂಬೈ: ಮುಂಬೈ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಮಳೆ ಸುರಿದಿದೆ. ಮುಂದಿನ 24 ಗಂಟೆಗಳಲ್ಲಿಯೂ ಸಾಧಾರಣದಿಂದ ಭಾರಿ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮಂಗಳವಾರ ಬೆಳಗ್ಗೆ 8ಕ್ಕೆ ಮುಕ್ತಾಯವಾದಂತೆ ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 95.81 ಮಿ.ಮೀ. ಮಳೆ ಸುರಿದಿದೆ. ಇದೇ ಅವಧಿಯಲ್ಲಿ ಪೂರ್ವಹಾಗೂ ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ116.73ಮಿ.ಮೀ.ಮತ್ತು115.09ಮಿ.ಮೀ. ಮಳೆಯಾಗಿದೆ.

ಮುಂಬೈನ ಜೀವನಾಡಿ ಎಂದೇ ಪರಿಗಣಿಸಲಾಗಿರುವ ಸ್ಥಳೀಯ ರೈಲು ಸೇವೆಗಳು ಕೇಂದ್ರ ಮತ್ತು ಪಶ್ಚಿಮ ರೈಲ್ವೆ ಮಾರ್ಗಗಳಲ್ಲಿ ಎಂದಿನಂತೆ ಸಂಚರಿಸುತ್ತಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ ಹಾಗೂ ಅಕ್ಕಪಕ್ಕದ ಜಿಲ್ಲೆಗಳಸುಮಾರು 75 ಲಕ್ಷ ಪ್ರಯಾಣಿಕರು ಪ್ರತಿದಿನ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುತ್ತಾರೆ.

ADVERTISEMENT

ಥಾಣೆಯಲ್ಲಿಯೂ ಮುಂದಿನ ಐದು ದಿನ ಭಾರಿ ಮಳೆ ಸುರಿಯಲಿದೆ ಎಂದು ಸೂಚನೆ ನೀಡಿರುವ ಐಎಂಡಿ, ಈ ಎರಡೂ ನಗರಗಳಲ್ಲಿ 'ಎಲ್ಲೋ ಅಲರ್ಟ್‌' ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.