ಮುಂಬೈ (ಮಹಾರಾಷ್ಟ್ರ): ನಗರದಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಮಹಾರಾಷ್ಟ್ರ ಸರ್ಕಾರ ಆರೆಂಜ್ ಅಲರ್ಟ್ ಘೋಷಿಸಿದೆ.
ಮಹಾರಾಷ್ಟ್ರಕ್ಕೆ ಮುಂಗಾರು ಪ್ರವೇಶಿಸಿದ್ದು ಬೆಳಗ್ಗೆಯಿಂದಲೇ ಮಳೆ ಬೀಳಲು ಆರಂಭಿಸಿತ್ತು. ಮಧ್ಯಾಹ್ನದ ನಂತರ ಭಾರಿ ಮಳೆಯಾದ ಕಾರಣ ಮುಂಬೈ ಸಂಪೂರ್ಣಅಸ್ತವ್ಯಸ್ತಗೊಂಡಿದೆ. ಕೆಲ ತಗ್ಗುಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.
ಪಾಲಿಕೆ ಸಿಬ್ಬಂದಿ ಸುಮಾರು 300ಕ್ಕೂ ಹೆಚ್ಚು ಮೋಟಾರ್ ಪಂಪ್‌ಗಳನ್ನು ಬಳಸಿ ವಿವಿಧ ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿರುವ ನೀರನ್ನು ಹೊರತೆಗೆದಿದ್ದಾರೆ.
ನಗರದ ಪ್ರಮುಖ ಪ್ರದೇಶಗಳಾದ ಗಾಂಧಿ ಮಾರ್ಕೆಟ್, ಅಂದೇರಿ, ಕೊಲಬಾ, ಕುರ್ಲಾ, ಸಿಯಾನ್, ಹಿಂದ್ ಮಾತಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಂದೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ.
ಕೊರೊನಾದಿಂದ ಸಮಸ್ಯೆಗೆ ಸಿಲುಕಿರುವ ಮುಂಬೈ ನಗರಕ್ಕೆ ಮಳೆ ಮತ್ತೊಂದು ಅವಾಂತರ ಸೃಷ್ಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.