ADVERTISEMENT

ತಮಿಳುನಾಡಿನಲ್ಲಿ ಭಾರಿ ಮಳೆ: ಆರೆಂಜ್‌ ಅಲರ್ಟ್‌ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ನವೆಂಬರ್ 2023, 3:36 IST
Last Updated 30 ನವೆಂಬರ್ 2023, 3:36 IST
<div class="paragraphs"><p>ರಸ್ತೆಯಲ್ಲಿ ನೀರು ತುಂಬಿರುವುದು</p></div>

ರಸ್ತೆಯಲ್ಲಿ ನೀರು ತುಂಬಿರುವುದು

   

ಪಿಟಿಐ ಚಿತ್ರ

ತಮಿಳುನಾಡು: ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಬುಧವಾರ ಭಾರಿ ಮಳೆಯಾಗಿದೆ. ಗುರುವಾರ ಕೂಡ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ADVERTISEMENT

ಗುರುವಾರ ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ ಹೇಳಲಾಗಿದೆ. 

ಪ್ರಾದೇಶಿಕ ಹವಾಮಾನ ಕೇಂದ್ರದ (RMC) ಪ್ರಕಾರ, ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಉತ್ತರ ಅಂಡಮಾನ್ ಸಮುದ್ರದ ಮೇಲೆ ಗಂಟೆಗೆ 40-45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. 

ತಮಿಳುನಾಡಿನ ಹಲವು ಭಾಗಗಳು ಜಲಾವೃತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜಲಾವೃತ ಪ್ರದೇಶಗಳ ವಿಡಿಯೊಗಳು ಹರಿದಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.