ADVERTISEMENT

ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಭಾರೀ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಸೆಪ್ಟೆಂಬರ್ 2022, 11:06 IST
Last Updated 15 ಸೆಪ್ಟೆಂಬರ್ 2022, 11:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ರಾಜಸ್ಥಾನದ ಹಲವು ಭಾಗಗಳಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದೆ.

ಹವಾಮಾನ ಇಲಾಖೆಪ್ರಕಾರ, ಕಳೆದ 24 ಗಂಟೆಗಳಲ್ಲಿ ಉದಯಪುರ ಮತ್ತು ಕೋಟಾ ಜಿಲ್ಲೆಗಳಲ್ಲಿ ಭಾರೀ ಮಳೆ ದಾಖಲಾಗಿದೆ. ಬರಾನ್ ಜಿಲ್ಲೆಯ ಶಹಬಾದ್‌ನಲ್ಲಿ ಗರಿಷ್ಠ 132 ಮಿ.ಮೀ ಮಳೆಯಾಗಿದೆ.

ಕೋಟಾ, ಉದಯಪುರ ಮತ್ತು ಭರತಪುರ ಭಾಗಗಳಲ್ಲಿ ಸಾಧಾರಣ ಮಳೆ ಅಥವಾ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಸೆಪ್ಟೆಂಬರ್ 16 ರಿಂದ ಮಳೆ ಕಡಿಮೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.