ADVERTISEMENT

ಮಹಾರಾಷ್ಟ್ರದಲ್ಲಿ ಭಾರಿ ಮಳೆ

ಏಜೆನ್ಸೀಸ್
Published 23 ಜುಲೈ 2021, 18:18 IST
Last Updated 23 ಜುಲೈ 2021, 18:18 IST
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಅಂಬೆವಾಡಿಯಲ್ಲಿ ಪ್ರವಾಹ ಪೀಡಿತ ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಯಿತು –- ಎಎಫ್‌ಪಿ ಚಿತ್ರ
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಅಂಬೆವಾಡಿಯಲ್ಲಿ ಪ್ರವಾಹ ಪೀಡಿತ ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಯಿತು –- ಎಎಫ್‌ಪಿ ಚಿತ್ರ   

ಮುಂಬೈ: ಗುರುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯ ಕಾರಣ ಮಹಾರಾಷ್ಟ್ರದ ಹಲವೆಡೆ ಭೂಕುಸಿತ ಉಂಟಾಗಿದೆ. ಮುಂಬೈನಲ್ಲಿ ಪ್ರವಾಹದ ಸ್ಥಿತಿ ತಲೆದೋರಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದ ಹಲವೆಡೆ ಪ್ರವಾಹ ಉಂಟಾಗಿದ್ದು, ಸಂಚಾರ ವ್ಯವಸ್ಥೆ ಏರುಪೇರಾಗಿದೆ.

ಇನ್ನೂ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

‘ಇಷ್ಟು ಮಳೆಯನ್ನು ನಿರೀಕ್ಷಿಸಿರಲಿಲ್ಲ. ಭಾರಿ ಮಳೆಯ ಕಾರಣ ಹಲವೆಡೆ ಭೂಕುಸಿತ ಉಂಟಾಗಿದೆ. ರಾಜ್ಯದ ನದಿಗಳು ತುಂಬಿ ಹರಿಯುತ್ತಿವೆ. ಜಲಾಶಯಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬಿಡಲಾಗಿದೆ. ಪ್ರವಾಹ ಸ್ಥಿತಿ ಎದುರಾಗಿರುವ ಕಾರಣ, ನದಿ ದಂಡೆಯ ಪ್ರದೇಶದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.ಜಲಾಶಯಗಳಿಂದ ನೀರು ಹೊರಬಿಟ್ಟಿರುವ ಬಗ್ಗೆ ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.