ADVERTISEMENT

Cyclone Asani: ಅಂಡಮಾನ್‌ನಲ್ಲಿ ಗಾಳಿ ಸಹಿತ ಮಳೆ, ಜನರ ಸ್ಥಳಾಂತರ

ಪಿಟಿಐ
Published 20 ಮಾರ್ಚ್ 2022, 13:05 IST
Last Updated 20 ಮಾರ್ಚ್ 2022, 13:05 IST
ಚೆನ್ನೈನಿಂದ ಅಂಡಮಾನ್‌ಗೆ ತೆರಳುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ.
ಚೆನ್ನೈನಿಂದ ಅಂಡಮಾನ್‌ಗೆ ತೆರಳುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ.   

ಪೋರ್ಟ್ ಬ್ಲೇರ್: ಅಂಡಮಾನ್ ನಿಕೋಬರ್ ದ್ವೀಪಕ್ಕೆ ಚಂಡಮಾರುತ ಆಸನಿ ಸಮೀಪಿಸುತ್ತಿದ್ದಂತೆ ಭಾನುವಾರ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಕರಾವಳಿ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಡಮಾನ್, ಚೆನ್ನೈ ಹಾಗೂ ವಿಶಾಖಪಟ್ಟಣದಲ್ಲಿ ಹಡಗು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವರ್ಷದ ಮೊದಲ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ದ್ವೀಪದ ವಿವಿಧ ಭಾಗಗಳಲ್ಲಿ ಆರು ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸುಮಾರು 150 ಸಿಬ್ಬಂದಿ ನಿಯೋಜಿಸಲಾಗಿದೆ.

ಪೋರ್ಟ್ ಬ್ಲೇರ್ ಸೇರಿದಂತೆ ಉತ್ತರ, ಮಧ್ಯ ಮತ್ತು ದಕ್ಷಿಣ ಅಂಡಮಾನ್‌ನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಪೋರ್ಟ್ ಬ್ಲೇರ್‌‌ನಲ್ಲಿ 68 ಮತ್ತು ದಿಗ್ಲಿಪುರ್‌ನಲ್ಲಿ 25 ಎನ್‌ಡಿಆರ್‌‍ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.

ಕರಾವಳಿ ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.