ADVERTISEMENT

ಹಿಮಾಚಲ ಪ್ರದೇಶ: ಮಳೆಯಿಂದ 7 ಮಂದಿ ಸಾವು?

ಪಿಟಿಐ
Published 6 ಜುಲೈ 2022, 12:46 IST
Last Updated 6 ಜುಲೈ 2022, 12:46 IST
ಪ್ರವಾಹದಿಂದ ಸಂಕಷ್ಟಕ್ಕೊಳಗಾದವರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿರುವ ಎನ್‌ಡಿಆರ್‌ಎಫ್‌ ಪಡೆ – ಪಿಟಿಐ ಚಿತ್ರ
ಪ್ರವಾಹದಿಂದ ಸಂಕಷ್ಟಕ್ಕೊಳಗಾದವರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿರುವ ಎನ್‌ಡಿಆರ್‌ಎಫ್‌ ಪಡೆ – ಪಿಟಿಐ ಚಿತ್ರ   

ಶಿಮ್ಲಾ: ‘ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭಾರಿ ಮಳೆ ಮತ್ತು ಹಠಾತ್ ಪ್ರವಾಹದಿಂದ ಉಂಟಾದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ’ ಎಂದುಕುಲುವಿನ ಪೊಲೀಸ್ ವರಿಷ್ಠಾಧಿಕಾರಿ ಗುರುದೇವ್ ಶರ್ಮಾ ತಿಳಿಸಿದ್ದಾರೆ.

‘ಕುಲುವಿನ ಮಲಾನಾ ವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 25ಕ್ಕೂ ಹೆಚ್ಚು ನೌಕರರನ್ನು ಪ್ರವಾಹದಿಂದ ಹಾನಿಗೊಳಗಾದ ಕಟ್ಟಡದಿಂದ ರಕ್ಷಿಸಲಾಗಿದೆ. ಜಿಲ್ಲೆಯಜಿಲ್ಲೆಯ ಪ್ರತ್ಯೇಕ ಭಾಗಗಳಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ. ಮಣಿಕರಣ್‌ನಲ್ಲಿ ಕನಿಷ್ಠ ನಾಲ್ಕು ಜನರು ಕೊಚ್ಚಿಹೋಗಿದ್ದು, ಪಾರ್ವತಿ ನದಿಗೆ ಅಡ್ಡಲಾಗಿರುವ ಸೇತುವೆ ಹಾನಿಯಾಗಿದೆ’ ಎಂದು ಅವರು ಹೇಳಿದ್ದಾರೆ.

‘ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.ಲಾರ್ಜೆ ಮತ್ತು ಪಾಂಡೋಹ್ ಅಣೆಕಟ್ಟುಗಳ ಗೇಟ್‌ಗಳನ್ನು ತೆರೆಯಲಾಗುತ್ತಿದ್ದು, ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.