ADVERTISEMENT

ಕೇರಳ: 8 ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 10:55 IST
Last Updated 21 ಅಕ್ಟೋಬರ್ 2021, 10:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

ರಾಜ್ಯದಪಟ್ಟನಂತಿಟ್ಟ, ಕೋಟಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ‘ಆರೆಂಜ್‌ ಅಲರ್ಟ್‌’ ಘೋಷಿಸಿದೆ.

ತಿರುವನಂತಪುರ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಹಿನ್ನೆಲೆಯಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ADVERTISEMENT

ಕೇರಳದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಬಹುತೇಕ ಸ್ಥಳಗಳು ಮತ್ತು ಲಕ್ಷದ್ವೀಪದ ಕೆಲವು ಕಡೆ ಮಳೆಯಾಗಿದೆ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.

ಪಾಲಕ್ಕಾಡ್ ಜಿಲ್ಲೆಯ ಪರಂಬಿಕುಲಂನಲ್ಲಿ 12 ಸೆಂ.ಮೀ. ಮಳೆಯಾಗಿದ್ದು, ತ್ರಿಶೂರ್ ಮತ್ತು ಪಾಲಕ್ಕಾಡ್‌ನಲ್ಲಿ ಕ್ರಮವಾಗಿ 11 ಸೆಂ.ಮೀ. ಮತ್ತು 9 ಸೆಂ.ಮೀ. ಮಳೆಯಾಗಿದೆ.

ಕೇರಳದ ಕರಾವಳಿಯಲ್ಲಿ ಗುರುವಾರ 40–50 ಕಿ.ಮೀ. ವೇಗದ ಚಂಡಮಾರುತದ ವಾತಾವರಣ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಐಎಂಡಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.