ಪ್ರಾತಿನಿಧಿಕ ಚಿತ್ರ
ಠಾಣೆ: ಮಹಾರಾಷ್ಟ್ರದ ಠಾಣೆ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದ್ದು, ಮರ ಉರುಳಿ ಬಿದ್ದಿರುವ ಮತ್ತು ಗೋಡೆ ಕುಸಿದಿರುವ ಬಗ್ಗೆ ಹಲವು ದೂರುಗಳು ಬಂದಿವೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
‘ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಶಿಯಲ್ಲಿ ಸೋಮವಾರ ಸಂಜೆ ವಾಣಿಜ್ಯ ಕಟ್ಟಡವೊಂದರ ಗೋಡೆ ಕುಸಿದು ಏಳು ವಾಹನಗಳಿಗೆ ಹಾನಿಯಾಗಿದೆ’ ಎಂದು ಠಾಣೆ ನಗರ ಪಾಲಿಕೆಯ ವಿಪತ್ತು ನಿರ್ವಹಣಾ ವಿಭಾಗ ತಿಳಿಸಿದೆ.
‘ಮಂಗಳವಾರ ಮುಂಜಾನೆ 8:30ರವರೆಗಿನ 24 ಗಂಟೆಗಳ ಅವಧಿಯಲ್ಲಿ ನಗರದಲ್ಲಿ 11.4 ಸೆಂ.ಮೀ ಮಳೆಯಾಗಿದೆ. ಈ ಮುಂಗಾರಿನಲ್ಲಿ ನಗರದಲ್ಲಿ ಈವರೆಗೆ 53.4 ಸೆಂ.ಮೀ ಮಳೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ 14.6 ಸೆಂ.ಮೀ ಮಳೆ ಸುರಿದಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.