ADVERTISEMENT

ತೆಲಂಗಾಣ: ಮುಂದುವರಿದ ಭಾರೀ ಮಳೆ

ಪಿಟಿಐ
Published 7 ಸೆಪ್ಟೆಂಬರ್ 2021, 12:33 IST
Last Updated 7 ಸೆಪ್ಟೆಂಬರ್ 2021, 12:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್‌: ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಮೂರನೇ ದಿನವಾದ ಮಂಗಳವಾರವೂ ಭಾರಿ ಮಳೆ ಮುಂದುವರಿದಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.

ವಾರಂಗಲ್‌ ಗ್ರಾಮಾಂತರ ಜಿಲ್ಲೆಯ ನಾಡಿಕುಡದಲ್ಲಿ 38.8 ಸೆಂ.ಮೀ ಮಳೆಯಾಗಿದ್ದು, ಕರೀಂನಗರ, ಜಯಶಂಕರ್‌ ಭೂಪಾಲಪಲ್ಲೆ, ವಾರಂಗಲ್‌ ನಗರ, ರಾಜಣ್ಣ, ಸಿರ್ಸಿಲ್ಲಾ, ಭದ್ರಾದ್ರಿ–ಕೊತ್ತಗುಡೆಂ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಸುರಿದಿದೆ.

ಭಾರೀ ಮಳೆಯಿಂದಾಗಿ ಈ ಭಾಗದ ಜಿಲ್ಲೆಗಳಲ್ಲಿನ ನದಿಗಳು ಮತ್ತು ಇತರ ಜಲಮೂಲಗಳು ತುಂಬಿವೆ. ಕೆಲವೆಡೆ ರಸ್ತೆಗಳಲ್ಲಿಯೂ ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ.

ADVERTISEMENT

ಹವಾಮಾನ ಇಲಾಖೆಯು ಬುಧವಾರವು ಭಾರಿ ಮಳೆ ಮುಂದುವರಿಯುವ ಸಾಧ್ಯೆತೆ ಇದೆ ಎಂದು ಮುನ್ಸೂಚನೆ ನೀಡಿದೆ.

ನವದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೂ ಸೇರಿದಂತೆ ರಾಜ್ಯದ ಎಲ್ಲ ಆಡಳಿತ ವ್ಯವಸ್ಥೆ ಎಚ್ಚರವಾಗಿದ್ದು ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.