ADVERTISEMENT

ಮುಂಬೈನಲ್ಲಿ ಭಾರಿ ಮಳೆ: ರೈಲು ಸಂಚಾರದಲ್ಲಿ ವ್ಯತ್ಯಯ

ಪಿಟಿಐ
Published 16 ಜುಲೈ 2021, 5:45 IST
Last Updated 16 ಜುಲೈ 2021, 5:45 IST
ಮುಂಬೈನಲ್ಲಿ ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ರಸ್ತೆಯಲ್ಲಿ ನೀರು ನಿಂತಿರುವ ದೃಶ್ಯ
ಮುಂಬೈನಲ್ಲಿ ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ರಸ್ತೆಯಲ್ಲಿ ನೀರು ನಿಂತಿರುವ ದೃಶ್ಯ   

ಮುಂಬೈ: ಶುಕ್ರವಾರ ಮುಂಜಾನೆಯಿಂದ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ರೈಲು ಸೇವೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನ ಪೂರ್ವ ಮತ್ತು ಪಶ್ಚಿಮ ಉಪ ನಗರಗಳಲ್ಲಿ ಕ್ರಮವಾಗಿ 7.5 ಸೆಂ.ಮೀ ಮತ್ತು 7.3 ಸೆಂ.ಮೀ ಮಳೆಯಾಗಿದೆ. ವಿವಿಧ ರೈಲು ನಿಲ್ದಾಣಗಳಲ್ಲಿನ ಹಳಿಗಳ ಮೇಲೆ ನೀರು ನಿಂತಿರುವುದರಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ನಗರದ ರಸ್ತೆಗಳ ಮೇಲೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸಂಚಾರವೂ ಸ್ಥಗಿತವಾಗಿದೆ.ಮುಂಬೈ ಮತ್ತು ಅದರ ಉಪನಗರಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.