ADVERTISEMENT

ಮುಂಬೈನಲ್ಲಿ ಭಾರಿ ಮಳೆ: ಬಸ್‌ – ರೈಲು ಸೇವೆ ಸ್ಥಗಿತ, ಸಾರ್ವಜನಿಕರ ಪರದಾಟ

ಪಿಟಿಐ
Published 12 ಜೂನ್ 2021, 9:52 IST
Last Updated 12 ಜೂನ್ 2021, 9:52 IST
ಮುಂಬೈನಲ್ಲಿ ಮಳೆ –ಪಿಟಿಐ ಚಿತ್ರ
ಮುಂಬೈನಲ್ಲಿ ಮಳೆ –ಪಿಟಿಐ ಚಿತ್ರ   

ಮುಂಬೈ: ಮಹಾರಾಷ್ಟ್ರದ‌ಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಬಸ್‌, ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.

ರೈಲು ಹಳಿಗಳು ನೀರಿನಿಂದ ಜಲಾವೃತಗೊಂಡಿರುವ ಕಾರಣಕ್ಕೆ ದಾದರ್‌ ಮತ್ತು ಕುರ್ಲಾ ನಿಲ್ದಾಣದ ನಡುವಿನ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

‘ಮುಂಬೈ, ಥಾಣೆ, ಪಾಲ್ಘರ್, ರಾಯಗಡ್ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಲಿದ್ದು, ಈಗಾಗಲೇ ಆರೇಂಜ್ ಆಲರ್ಟ್‌ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಹಲವಡೆ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಮುಂಬೈನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮೂರು ಗಂಟೆಗೂ ಹೆಚ್ಚು ಕಾಲ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.