ADVERTISEMENT

ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಇಂದೋರ್‌ ಜಿಲ್ಲಾಡಳಿತದ ಆದೇಶ

ಪಿಟಿಐ
Published 1 ಆಗಸ್ಟ್ 2025, 11:28 IST
Last Updated 1 ಆಗಸ್ಟ್ 2025, 11:28 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸದಿದ್ದರೆ ಅವರ ವಾಹನಗಳಿಗೆ ಪೆಟ್ರೋಲ್‌ ಬಂಕ್‌ನಲ್ಲಿ ಇಂಧನ ಹಾಕುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲೆಯಾದ್ಯಂತ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳ ನೇತೃತ್ವದಲ್ಲಿ ಪೆಟ್ರೋಲ್‌ ಬಂಕ್‌ಗಳ ತಪಾಸಣೆ ನಡೆಯುತ್ತಿದೆ. ನಿಯಮ ಉಲ್ಲಂಘಿಸಿದ ಪೆಟ್ರೋಲ್‌ ಬಂಕ್‌ಗಳಿಗೆ ಬೀಗ ಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ನಗರದಲ್ಲಿ ಸೀಟ್‌ ಬೆಲ್ಟ್‌ ಹಾಗೂ ಹೆಲ್ಮೆಟ್‌ ಸೇರಿದಂತೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹಾಗೂ ರಸ್ತೆ ಸುರಕ್ಷತೆ ಸಮಿತಿಯ ಅಧ್ಯಕ್ಷ ಅಭಯ್‌ ಮನೋಹರ್‌ ಅವರು ಕಳೆದ ವಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರು.

ಈ ಕುರಿತು ಇಂದೋರ್‌ ಜಿಲ್ಲಾಡಳಿತವು ಕಠಿಣ ಕ್ರಮಕ್ಕೆ ಮುಂದಾಗಿದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ಒಂದು ವರ್ಷ ಜೈಲು ಅಥವಾ ₹5000 ದಂಡ ಹಾಗೂ ಎರಡೂ ಕ್ರಮಗಳನ್ನು ಕೂಡ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.