ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಆಡಳಿತಾರೂಢ ಜೆಎಂಎಂ ಪಕ್ಷದ ಕೇಂದ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರ ತಂದೆ ಶಿಬು ಸೊರೇನ್ ಅವರನ್ನು ಪಕ್ಷದ ಸಂಸ್ಥಾಪಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ಶಿಬು ಸೊರೇನ್ ಅವರು 38 ವರ್ಷ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಅಧ್ಯಕ್ಷರಾಗಿದ್ದರು. ಅವರ ಮಗ ಹೇಮಂತ್ ಸೊರೇನ್ ಅವರು 2015ರಿಂದ ಪಕ್ಷದ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.