ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಅವರ ಪುತ್ರ ನಿಕುಂಜ್ ಗುಪ್ತಾ
ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗುವ ಮೂಲಕ ತಾಯಿಯ 30 ವರ್ಷಗಳ ಕಠಿಣ ಪರಿಶ್ರಮಕ್ಕೆ ಫಲ ದೊರಕಿದೆ ಎಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ರೇಖಾ ಗುಪ್ತಾ ಅವರ ಪುತ್ರ ನಿಕುಂಜ್ ಗುಪ್ತಾ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ತಾಯಿಗೆ ಯಾವುದೇ ರಾಜಕೀಯ ಬೆಂಬಲವಿರಲಿಲ್ಲ. ಹಗಲಿರುಳು ಕಠಿಣ ಪರಿಶ್ರಮದಿಂದ ಅವರು ಇಂದು ಈ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅವರ ಕಠಿಣ ಪರಿಶ್ರಮವೇ ಅವರ ರಾಜಕೀಯ ಜೀವನವನ್ನು ರೂಪಿಸಿದೆ. ಅವರು ಎರಡು ಬಾರಿ ಕೌನ್ಸಿಲರ್ ಆಗಿ, ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಮತ್ತು ಈಗ ದೆಹಲಿಯ ಮುಖ್ಯಮಂತ್ರಿಯಾಗಿ ಮಹತ್ವದ ಹುದ್ದೆಯನ್ನು ಅಲಂಕರಿಸಿದ್ದಾರೆ’ ಎಂದು ಹೇಳಿದ್ದಾರೆ.
ನನ್ನ ತಾಯಿಯ ರಾಜಕೀಯ ಪ್ರಯಾಣದಲ್ಲಿ ಮೊದಲ ದಿನದಿಂದಲೂ ಈವರೆಗೆ ನಮ್ಮ ಇಡೀ ಕುಟುಂಬವು ಅವರನ್ನು ಬೆಂಬಲಿಸಿದೆ ಎಂದು ನಿಕುಂಜ್ ತಿಳಿಸಿದ್ದಾರೆ.
ಶಾಲಿಮಾರ್ ಬಾಗ್ ಕ್ಷೇತ್ರದ ಬಿಜೆಪಿ ಶಾಸಕಿ ರೇಖಾ ಗುಪ್ತಾ ಅವರು ದೆಹಲಿ ಮುಖ್ಯಮಂತ್ರಿಯಾಗಿ ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ದೆಹಲಿಯ 32 ವರ್ಷಗಳ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.