ADVERTISEMENT

ಕೊರೊನಾ ಸೋಂಕಿತ ಕೇಂದ್ರ ಸಚಿವರಿವರು...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಸೆಪ್ಟೆಂಬರ್ 2020, 17:07 IST
Last Updated 23 ಸೆಪ್ಟೆಂಬರ್ 2020, 17:07 IST
   

ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಬುಧವಾರ 51 ಲಕ್ಷದ ಗಡಿದಾಟಿದೆ. ಒಂದೇ ದಿನ 90,123 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 51,18,253 ಮುಟ್ಟಿದೆ. ಈ ಪೈಕಿ 10,09,976 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 40,25,079 ಮಂದಿ ಈವರೆಗೆ ಕೋವಿಡ್‌ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಕೇಂದ್ರ ಸಚಿವ ಸಂಪುಟದ ಹಲವು ಸಚಿವರನ್ನು ಕೋವಿಡ್-19 ಬಾಧಿಸಿತ್ತು. ಕೆಲವರು ಚೇತರಿಸಿಕೊಂಡು ಗುಣಮುಖರಾದರೆ, ಕೆಲವರು ಇಂದಿಗೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆಯಷ್ಟೇ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. 'ನಾನು ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದೇನೆ' ಎಂದು ಕೇಂದ್ರ ರಸ್ತೆ ಸಾರಿಗೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದರು.

ADVERTISEMENT

ಕೊರೊನಾ ಸೋಂಕಿತರಾದ ಕೇಂದ್ರ ಸಚಿವರ ವಿವರ ಇಲ್ಲಿದೆ...
1) ಗೃಹ ಸಚಿವ ಅಮಿತ್ ಶಾ
2) ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್
3) ಇಂಧನ ಸಚಿವ ಧರ್ಮೇಂದ್ರ ಪ್ರಧಾನ್
4) ಹಣಕಾಸು ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘ್ವಾಲ್
5) ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್
6) ಆಯುಷ್ ಸಚಿವ ಶ್ರೀಪಾದ್ ನಾಯ್ಕ್
7) ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.