ಎಐ ಚಿತ್ರ
ಸಂಬಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿರುವ ಹಳ್ಳಿಯೊಂದರಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶನಿವಾರ ಸುಮಾರು 500 ಗ್ರಾಂ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಜಾನೆ ಚಿಲ್ಯಾರಿ ಗ್ರಾಮದಲ್ಲಿ ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಇದನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಶುಕ್ರವಾರ ತಡರಾತ್ರಿ ಪಾಕಿಸ್ತಾನ ಕಡೆಯಿಂದ ಬಂದ ಶಂಕಿತ ಡ್ರೋನ್‌ನಿಂದ ಹಳದಿ ಪ್ಯಾಕೆಟ್‌ವೊಂದು ಕೆಳಕ್ಕೆ ಬಿದ್ದಿದೆ ಎಂದು ಸ್ಥಳೀಯ ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ್ದಾರೆ.
ತಕ್ಷಣ ಶೋಧ ಕಾರ್ಯಾಚರಣೆ ಕೈಗೊಂಡ ಪೊಲೀಸರು, ಹಳದಿ ಪ್ಯಾಕೆಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆ ಪ್ಯಾಕೆಟ್ ಒಳಗೆ 500 ಗ್ರಾಂ ಹೆರಾಯಿನ್ ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.