ಹೆರಾಯಿನ್ ವಶ
ಗುವಾಹಟಿ: ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ಮಂಗಳವಾರ ₹9 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದ್ದು ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪುರ ರಾಜ್ಯದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಪಡೆದ ವಿಶೇಷ ಕಾರ್ಯಪಡೆ ಪೊಲೀಸರು ಎರಡು ವಾಹನಗಳಲ್ಲಿ ಸಾಗಿಸುತ್ತಿದ್ದ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಒಂದೇ ಕುಟುಂಬದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಬೂನು ಬಾಕ್ಸ್‌ಗಳಲ್ಲಿ 1128 ಗ್ರಾಂ ಹೆರಾಯಿನ್ ಅನ್ನು ಸಾಗಿಸುತ್ತಿದ್ದರು. ಇದರ ಮೌಲ್ಯ ಸುಮಾರು ₹9 ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಸಂಬಂಧ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.