ನವದೆಹಲಿ: ಕರ್ನಾಟಕ ಸೇರಿದಂತೆ ಪ್ರಮುಖ ರಾಜ್ಯಗಳ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆಗೆ ಪಕ್ಷ ಚಿಂತನೆ ನಡೆಸಿದೆ.
ಆ ಬಳಿಕವೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. ಹೀಗಾಗಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ದೊಡ್ಡ ರಾಜ್ಯಗಳಲ್ಲಿ ಅಧ್ಯಕ್ಷರ ಆಯ್ಕೆಗೆ ಶೀಘ್ರವೇ ಚುನಾವಣೆ ನಡೆಸಲು ಪಕ್ಷದ ನಾಯಕತ್ವ ಉತ್ಸುಕವಾಗಿದೆ.
ಉತ್ತರ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಭೂಪೇಂದ್ರ ಸಿಂಗ್ ಮತ್ತು ಮಧ್ಯಪ್ರದೇಶ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರನ್ನು ಬದಲಿಸುವ ಇರಾದೆಯನ್ನು ಬಿಜೆಪಿ ಹೈಕಮಾಂಡ್ ಹೊಂದಿದೆ. ಆದರೆ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಕರ್ನಾಟಕದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.