ADVERTISEMENT

ಹೊಸ ಐ.ಟಿ ನಿಯಮಾವಳಿ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಆ.27ಕ್ಕೆ ಮುಂದೂಡಿಕೆ

ಪಿಟಿಐ
Published 30 ಜುಲೈ 2021, 10:35 IST
Last Updated 30 ಜುಲೈ 2021, 10:35 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಐ.ಟಿ ನಿಯಮಾವಳಿಗಳನ್ನು ಪ್ರಶ್ನಿಸಿ ಫೇಸ್‌ಬುಕ್‌ ಮತ್ತು ವಾಟ್ಸ್‌ಆ್ಯಪ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್‌ 27ರಂದು ನಡೆಸುವುದಾಗಿ ದೆಹಲಿ ಹೈಕೋರ್ಟ್‌ ಶುಕ್ರವಾರ ಹೇಳಿದೆ.

ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೇಂದ್ರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲರಾದ ಹರೀಶ್‌ ಸಾಲ್ವೆ ವಿರೋಧ ವ್ಯಕ್ತಪಡಿಸಲಿಲ್ಲ. ಹೀಗಾಗಿ ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರನ್ನು ಒಳಗೊಂಡ ಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.