ADVERTISEMENT

ಮೆಹಬೂಬಾ ಮುಫ್ತಿ ಬಿಡುಗಡೆಗೆ ರಾಹುಲ್‌ ಗಾಂಧಿ‌ ಒತ್ತಾಯ

ಪಿಟಿಐ
Published 2 ಆಗಸ್ಟ್ 2020, 13:28 IST
Last Updated 2 ಆಗಸ್ಟ್ 2020, 13:28 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ:ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ (ಪಿಎಸ್‌ಎ) ಬಂಧಿಸಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರಒತ್ತಾಯಿಸಿದ್ದಾರೆ.

ಸರ್ಕಾರ ರಾಜಕೀಯ ಮುಖಂಡರನ್ನು ಕಾನೂನುಬಾಹಿರವಾಗಿ ಬಂಧಿಸುವುದರಿಂದ ಭಾರತದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ಧಾರೆ.

ಕಾಶ್ಮೀರಕ್ಕೆ ವಿಶೇಷ ಸ್ಥಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.ಕಳೆದ ವಾರ, ಜಮ್ಮು ಮತ್ತು ಕಾಶ್ಮೀರ ಆಡಳಿತವು ಮೆಹಬೂಬಾ ಮುಫ್ತಿ‌ ಅವರ ಬಂಧನದ ಅವಧಿಯನ್ನುಮೂರು ತಿಂಗಳವರೆಗೆ ವಿಸ್ತರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.