
ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗದಂತಹ(ಯುಜಿಸಿ) ಸಂಸ್ಥೆಗಳ ಬದಲು, ಏಕ ರೂಪದ ಉನ್ನತ ಶಿಕ್ಷಣ ನಿಯಂತ್ರಣ ಸಂಸ್ಥೆ ಸ್ಥಾಪಿಸುವ ಮಸೂದೆಯನ್ನು ಡಿಸೆಂಬರ್ 1ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆದಿದೆ.
ಈ ಸಂಬಂಧ ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳ ಪಟ್ಟಿಯಲ್ಲಿ ಪ್ರಸ್ತಾಪಿಸಿದ ಮಸೂದೆಯನ್ನು ಸೇರಿಸಲಾಗಿದೆ. ಲೋಕಸಭೆಯ ವೇಳಾಪಟ್ಟಿ ಪ್ರಕಾರ, ಪ್ರಸ್ತಾವಿತ ಈ ಮಸೂದೆಯನ್ನು ‘ಭಾರತ ಉನ್ನತ ಶಿಕ್ಷಣ ಆಯೋಗದ ಮಸೂದೆ’ ಎಂದು ನಾಮಕರಣ ಮಾಡಲಾಗಿದೆ.
ಯುಜಿಸಿ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮತ್ತು ಶಿಕ್ಷಕರ ಶಿಕ್ಷಣ ರಾಷ್ಟ್ರೀಯ ಮಂಡಳಿಯನ್ನು(ಎನ್‌ಸಿಟಿಇ) ಬದಲಾಯಿಸಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾದ ಭಾರತೀಯ ಉನ್ನತ ಶಿಕ್ಷಣ ಆಯೋಗವನ್ನು(ಎಚ್‌ಇಸಿಐ) ರಚಿಸಲು ಉದ್ದೇಶಿಸಲಾಗಿದೆ.
ಪ್ರಸ್ತುತ ಯುಜಿಸಿಯು ತಾಂತ್ರಿಕೇತರ ಉನ್ನತ ಶಿಕ್ಷಣವನ್ನು, ಎಐಸಿಟಿಇಯು ತಾಂತ್ರಿಕ ಶಿಕ್ಷಣವನ್ನು ಮೇಲ್ವಿಚಾರಣೆ ಮಾಡುತ್ತದೆ. ಎನ್‌ಸಿಟಿಇ ಶಿಕ್ಷಕರ ಶಿಕ್ಷಣದ ನಿಯಂತ್ರಣದ ಉಸ್ತುವಾರಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.