ADVERTISEMENT

Covid-19 India update | 27,114 ಹೊಸ ಪ್ರಕರಣ; ಏರುತ್ತಲೇ ಇದೆ ಸೋಂಕಿತರ ಸಂಖ್ಯೆ

8.2 ಲಕ್ಷ ಜನರಿಗೆ ತಗುಲಿದ ಕೋವಿಡ್–19

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2020, 5:10 IST
Last Updated 11 ಜುಲೈ 2020, 5:10 IST
   

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಬರೋಬ್ಬರಿ 27,114 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಇದೇ ವೇಳೆ 519 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,20,916 ಗೆ ಏರಿಕೆಯಾಗಿದೆ. ಇದರಲ್ಲಿ 5,15,385 ಮಂದಿ ಗುಣಮುಖರಾಗಿದ್ದು, ಇನ್ನೂ 2,83,407 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರ ಸಂಖ್ಯೆ 22,123ಕ್ಕೆ ತಲುಪಿದೆ.

ಶುಕ್ರವಾರ ಒಂದೇದಿನ2,82,511ಜನರ ಮಾದರಿ ಪರೀಕ್ಷೆ ನಡೆಸಲಾಗಿದ್ದು,ದೇಶದಲ್ಲಿ ಸೋಂಕು ಕಾಣಿಸಿಕೊಂಡಾಗಿನಿಂದ ಇಲ್ಲಿಯವರೆಗೆ ಒಟ್ಟು1,13,07,002ಜನರನ್ನು ಪರೀಕ್ಷಿಸಲಾಗಿದೆ.

ADVERTISEMENT

ಮಹಾರಾಷ್ಟ್ರದಲ್ಲಿ ಶುಕ್ರವಾರ 7,862ಹೊಸ ಪ್ರಕರಣಗಳು ವರದಿಯಾಗಿವೆ. ಇಲ್ಲಿಇದುವರೆಗೆ ಒಟ್ಟು2,38,461ಮಂದಿಗೆ ಸೋಂಕು ತಗುಲಿದ್ದು,1,32,625ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.95,943 ಪ್ರಕರಣಗಳು ಸಕ್ರಿಯವಾಗಿವೆ.9,893 ಜನರು ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ3,680 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆಒಟ್ಟಾರೆ1,30,261 ಮಂದಿಗೆ ಸೋಂಕು ತಗುಲಿದಂತಾಗಿದೆ. ಇನ್ನೂ46,108 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ82,324 ಮಂದಿ ಗುಣಮುಖರಾಗಿದ್ದು,1,829 ಜನರು ಮೃತಪಟ್ಟಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಟ್ಟು1 09,140 ಮಂದಿಗೆ ಸೋಂಕು ತಗುಲಿದೆ.3,300 ಸಾವಿನ ಪ್ರಕರಣಗಳು ವರದಿಯಾಗಿದೆ. ಉಳಿದಂತೆ84,694 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು,ಇನ್ನೂ21,146 ಪ್ರಕರಣಗಳು ಸಕ್ರಿಯವಾಗಿವೆ.

ಗುಜರಾತ್‌ನಲ್ಲಿ ಒಟ್ಟಾರೆ40,069 ಜನರಿಗೆ ಸೋಂಕು ತಗುಲಿದೆ.9,900 ಸಕ್ರಿಯ ಪ್ರಕರಣಗಳಿದ್ದು,28,147 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು2,022 ಮಂದಿ ಮೃತಪಟ್ಟಿದ್ದಾರೆ.

ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಜ್ಯಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವಕರ್ನಾಟಕದಲ್ಲಿ ಶುಕ್ರವಾರ ಸಂಜೆ 5 ಗಂಟೆ ವರೆಗೆ ಸೋಂಕಿತರ ಸಂಖ್ಯೆ 33,418ಕ್ಕೆ ಏರಿಕೆಯಾಗಿದೆ. 543 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 13,836 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು,ಇನ್ನೂ 19,035 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.