ADVERTISEMENT

Covid-19 India Update: 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ ಪ್ರಕರಣಗಳು 40,425

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2020, 4:31 IST
Last Updated 20 ಜುಲೈ 2020, 4:31 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ   

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 40,425 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕದ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 11 ಲಕ್ಷ ದಾಟಿದೆ.

ಸೋಂಕಿನಿಂದ ಒಂದು ದಿನದಲ್ಲಿ ದೇಶದಾದ್ಯಂತ 681 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ದೇಶದಲ್ಲಿ 3,90,459 ಸಕ್ರಿಯ ಪ್ರಕರಣಗಳಿದ್ದು, 7,00,087 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 11,18,043 ಕೋವಿಡ್‌ ಪ್ರಕರಣಗಳು ದಾಖಲಾಗಿವೆ ಹಾಗೂ 27,497 ಮಂದಿ ಸೋಂಕಿನ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ಜುಲೈ 19ರ ವರೆಗೂ 1,40,47,908 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ಹೇಳಿದೆ. ಭಾನುವಾರ ಒಂದೇ ದಿನ 2,56,039 ಮಾದರಿಗಳ ಪರೀಕ್ಷೆ ನಡೆದಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 3,10,455 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 11,854 ಮಂದಿ ಮೃತಪಟ್ಟಿದ್ದಾರೆ. 1,29,032 ಸಕ್ರಿಯ ಪ್ರಕರಣಗಳಿದ್ದು, 1,69,569 ಮಂದಿ ಗುಣಮುಖರಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ 16,031 ಸಕ್ರಿಯ ಪ್ರಕರಣಗಳಿದ್ದು, 1,03,134 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,22,793 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 3,628 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 50,297 ಸಕ್ರಿಯ ಪ್ರಕರಣಗಳಿದ್ದು, 1,17,915 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,70,693 ಕೋವಿಡ್‌ ಪ್ರಕರಣಗಳ ಪೈಕಿ 2,481 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.