ADVERTISEMENT

ಹೆದ್ದಾರಿಯಲ್ಲಿ ವಾಕಿಂಗ್! ಎಸ್‌ಯುವಿ ಡಿಕ್ಕಿಯಾಗಿ ತಾಯಿ, ಮಗ ಸಾವು

ಪಿಟಿಐ
Published 3 ಅಕ್ಟೋಬರ್ 2025, 10:31 IST
Last Updated 3 ಅಕ್ಟೋಬರ್ 2025, 10:31 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಕೃಷ್ಣಗಿರಿ: ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬೆಳಗಿನ ವಾಯುವಿಹಾರ ಮಾಡುತ್ತಿರುವಾಗ ಎಸ್‌ಯುವಿ ಕಾರೊಂದು ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶೂಲಗಿರಿ ಬಳಿ ಇಂದು ಬೆಳಿಗ್ಗೆ ನಡೆದಿದೆ.

ADVERTISEMENT

ಮೃತರನ್ನು ಉತ್ತರಪ್ರದೇಶ ಮೂಲದ ಶ್ವೇತಾ ಬಾನು (45) ಹಾಗೂ ಅವರ 15 ವರ್ಷದ ಮಗ ಸಮೀರ್ ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಕೃಷ್ಣಗಿರಿ ಪೊಲೀಸರು ತಿಳಿಸಿದ್ದಾರೆ.

ಹೆದ್ದಾರಿ ಪಕ್ದದ ಸ್ಥಳೀಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಉತ್ತರಪ್ರದೇಶ ಮೂಲದ ಶ್ವೇತಾ ಬಾನು ಹಾಗೂ ಅವರ ಮಗ ಸಮೀರ್ ವಾಯುವಿಹಾರದ ಸಲುವಾಗಿ ಹೆದ್ದಾರಿ ಬಳಸಿದ್ದಾರೆ. ಇದೇ ವೇಳೆ ಅವರಿಗೆ ಎಸ್‌ಯುವಿ ಕಾರು ಹಿಂದಿನಿಂದ ಅಪ್ಪಳಿಸಿದೆ ಎಂದು ತಿಳಿಸಿದ್ದಾರೆ.

ಡಿಕ್ಕಿಯ ನಂತರ ಕಾರು ಕಾಲುವೆಗೆ ಉರುಳಿ ಬಿದ್ದಿತ್ತು. ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.