ADVERTISEMENT

ದಿನಕ್ಕೆ 50 ಕಿ.ಮೀ ಹೆದ್ದಾರಿ ನಿರ್ಮಾಣ ಮಾಡುವ ಗುರಿ

2025ರ ಒಳಗಾಗಿ 2 ಲಕ್ಷ ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಉದ್ದೇಶ

​ಪ್ರಜಾವಾಣಿ ವಾರ್ತೆ
Published 15 ಮೇ 2022, 16:34 IST
Last Updated 15 ಮೇ 2022, 16:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 2022–23ನೇ ಸಾಲಿನಲ್ಲಿಪ್ರತಿ ದಿನ 50 ಕಿ.ಮೀ. ನಂತೆ ದಾಖಲೆಯ 18,000 ಕಿ.ಮೀ ಹೆದ್ದಾರಿ ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭಾನುವಾರ ತಿಳಿಸಿದೆ.

‘2025ರ ಒಳಗಾಗಿ 2 ಲಕ್ಷ ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸುವ ಉದ್ದೇಶ ಇದೆ. ಕೋವಿಡ್‌ ಸಂಬಂಧಿತ ಅಡೆತಡೆಗಳು ಮತ್ತು ದೇಶದ ಕೆಲವು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚು ಕಾಲದವರೆಗೆ ಮಳೆ ಮುಂದುವರಿದ ಕಾರಣ 2021–22ನೇ ಸಾಲಿನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಿಧಾನಗೊಂಡಿತ್ತು. ದಿನಕ್ಕೆ ಕೇವಲ 28.64 ಕಿ.ಮೀ ರಸ್ತೆಯನ್ನು ಮಾತ್ರ ನಿರ್ಮಾಣ ಮಾಡಲಾಗಿದೆ. ಆದರೆ 2020–21ರಲ್ಲಿ ದಿನವೊಂದಕ್ಕೆ ದಾಖಲೆಯ 37 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿತ್ತು’ ಎಂದು ಅದು ತಿಳಿಸಿದೆ.

2021–22ರಲ್ಲಿ 10,457 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. 2020–21ರಲ್ಲಿ 13,327 ಕಿ.ಮೀ ರಸ್ತೆ ನಿರ್ಮಿಸಲಾಗಿತ್ತು ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.