ಲಖನೌ: ನಮ್ಮ ವೈಯಕ್ತಿಕ ಧಾರ್ಮಿಕ ನಂಬಿಕೆಗಳನ್ನು ದೇಶ ಮತ್ತು ಸಂಸ್ಥೆಗಳ ಮೇಲೆ ಹೇರಲಾಗದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಹಿಜಾಬ್–ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.
‘ವ್ಯವಸ್ಥೆಯು ಸಂವಿಧಾನದ ಅನುಸಾರ ನಡೆಯಬೇಕು. ನಮ್ಮ ವೈಯಕ್ತಿಕ ಧಾರ್ಮಿಕ ನಂಬಿಕೆಗಳನ್ನು, ಆಯ್ಕೆಗಳನ್ನು ದೇಶದ ಮತ್ತು ಅದರ ಸಂಸ್ಥೆಗಳ ಮೇಲೆ ಹೇರಬಾರದು. ಉತ್ತರ ಪ್ರದೇಶದ ಎಲ್ಲ ನೌಕರರು ಕಾವಿ ಬಟ್ಟೆ ಧರಿಸಬೇಕೆಂದು ನಾನು ಹೇಳಲು ಸಾಧ್ಯವೇ? ಶಾಲೆಗಳಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು’ ಎಂದು ಯೋಗಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.