
ನಹಾನ್: ಹಿಮಾಚಲ ಪ್ರದೇಶದ ಸಿರ್‌ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ 500 ಅಡಿ ಆಳದ ಕಂದಕಕ್ಕೆ ಬಿದ್ದು ಒಂಬತ್ತು ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ.
ಶಿಮ್ಲಾದಿಂದ ರಾಜಗಢ ಮೂಲಕ ಕುಪ್ವಿಗೆ ಹೋಗುತ್ತಿದ್ದ ಬಸ್ ಜಿಲ್ಲಾ ಕೇಂದ್ರವಾದ ನಹಾನ್‌ನಿಂದ 95 ಕಿ.ಮೀ. ದೂರದಲ್ಲಿರುವ ಹರಿಪುರಧಾರ್ ಗ್ರಾಮದ ಬಳಿ ಕಂದಕಕ್ಕೆ ಉರುಳಿದೆ.
ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಗಾಯಾಳುಗಳನ್ನು ಸಂಗಢಾಹ ಹಾಗೂ ದದಾಹು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಸುನಿಲ್ ಕಾಯತ್ ತಿಳಿಸಿದ್ದಾರೆ.
ಮೃತರ ಸಂಬಂಧಿಕರಿಗೆ ಅಗತ್ಯ ನೆರವು ಹಾಗೂ ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.
ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಚಾಲಕ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ. ಹಿಮ ಶೇಖರಣೆಯಿಂದಾಗಿ ಬಸ್ ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.