ಶಿಮ್ಲಾ: ಧೀಡಿರ್ ಭೂಕುಸಿತ ಮತ್ತು ಪ್ರವಾಹದ ಪರಿಣಾಮದಿಂದಾಗಿ ಹಿಮಾಚಲ ಪ್ರದೇಶದದಲ್ಲಿ ಇದುವರೆಗೂ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ.
ಧೀಡಿರ್ ಪ್ರವಾಹ ಮತ್ತು ಭೂಕುಸಿತದ ಪರಿಣಾಮ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಔತ್ ಬಳಿ ಚಂಡೀಗಢ-ಮನಾಲಿ ಹೆದ್ದಾರಿಯಲ್ಲಿ ಕಳೆದ 24 ಗಂಟೆಗಳಿಂದ ಸ್ಥಗಿತಗೊಂಡಿದ್ದ ವಾಹನ ಸಂಚಾರವನ್ನು ಪುನಃ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಸಂಜೆಯಿಂದಲೇ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರವಾಸಿಗರು ಸೇರಿದಂತೆ ನೂರಾರು ಪ್ರಯಾಣಿಕರು ಪರದಾಡುವಂತಾಯಿತು.
ಭೂಕುಸಿತದ ಪರಿಣಾಮದಿಂದ ಮಂಡಿ-ಪಂಡೋಹ್–ಕುಲ್ಲು ಹೆದ್ದಾರಿಯ ಸುಮಾರು 70 ಕಿ.ಮೀ ಖೋಟಿನಲ್ಲಾಹ್‌ನ 6 ಕಿ.ಮೀ ಮಾರ್ಗವನ್ನು ನಿರ್ಬಂಧಿಸಲಾಗಿದೆ. ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಜೂನ್ 28 ರಿಂದ ಜುಲೈ 1ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಒಟ್ಟು 301 ರಸ್ತೆಗಳ ಸಂಚಾರ ಸ್ಥಗಿತಗೊಂಡಿದ್ದು, 140 ವಿದ್ಯುತ್ ಪರಿವರ್ತಕಗಳು(ಟ್ರಾನ್ಸ್ಫಾರ್ಮರ್) ಕಾರ್ಯನಿರ್ವಹಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.