ಬಾಂಬ್ ಬೆದರಿಕೆ
(ಸಾಂದರ್ಭಿಕ ಚಿತ್ರ)
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಮತ್ತು ಪಕ್ಕದ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆಯ ಇ– ಮೇಲ್ ಬಂದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಂಡಿ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆಯ ಇ– ಮೇಲ್ ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲಾಧಿಕಾರಿ (ಡಿಸಿ) ಕಚೇರಿ ಮತ್ತು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಪ್ರವೇಶ ದ್ವಾರಗಳನ್ನು ಮುಚ್ಚಿಲಾಯಿತು, ಜನರನ್ನು ಬೇರೆಡೆ ಸ್ಥಳಾಂತರಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಚೇರಿ ಮತ್ತು ನ್ಯಾಯಾಲಯದ ಸಂಕೀರ್ಣದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಭದ್ರತೆಯನ್ನು ಖಚಿತಪಡಿಸಿಕೊಂಡ ಬಳಿಕ ಮತ್ತೆ ಕಚೇರಿ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ಮಧ್ಯಾಹ್ನ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.