ADVERTISEMENT

ನವೆಂಬರ್ 12ಕ್ಕೆ ಒಂದೇ ಹಂತದಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 11:01 IST
Last Updated 14 ಅಕ್ಟೋಬರ್ 2022, 11:01 IST
   

ನವದೆಹಲಿ: ನವೆಂಬರ್ 12ಕ್ಕೆ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.

68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಇದೇ 17ರಂದು ಅಧಿಸೂಚನೆ ಜಾರಿಗೆ ಬರಲಿದ್ದು,ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 25ರಂದು ಕಡೆಯ ದಿನ. 27ರಂದು ನಾಮಪತ್ರಗಳ ಪರಿಶೀಲನೆ. 29ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ.

ADVERTISEMENT

ಯಾವುದೇ ತೊಡಕಿಲ್ಲದೆ ಚುನಾವಣೆ ಆಯೋಜನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.