ADVERTISEMENT

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ: ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ

ಪಿಟಿಐ
Published 13 ಸೆಪ್ಟೆಂಬರ್ 2025, 7:03 IST
Last Updated 13 ಸೆಪ್ಟೆಂಬರ್ 2025, 7:03 IST
<div class="paragraphs"><p>ಹಿಮಾಚಲ ಪ್ರದೇಶದಲ್ಲಿ&nbsp;ಶನಿವಾರ ಮೇಘಸ್ಫೋಟ ಸಂಭವಿಸಿದೆ.</p></div>

ಹಿಮಾಚಲ ಪ್ರದೇಶದಲ್ಲಿ ಶನಿವಾರ ಮೇಘಸ್ಫೋಟ ಸಂಭವಿಸಿದೆ.

   

–ಪಿಟಿಐ ಚಿತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ಮೇಘಸ್ಫೋಟ ಸಂಭವಿಸಿದೆ. ಇದರ ಪರಿಣಾಮ ನೂರಾರು ವಾಹನಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಜತೆಗೆ, ಅಪಾರ ಪ್ರಮಾಣದ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಏತನ್ಮಧ್ಯೆ, ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು ಆವರಿಸಿದ್ದು, ಕಡಿಮೆ ಗೋಚರತೆ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು. ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾನುವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

‘ಅಟ್ಟಾರಿ-ಲೇಹ್ ರಸ್ತೆ (ರಾಷ್ಟ್ರೀಯ ಹೆದ್ದಾರಿ-3), ಆಟ್-ಸೈಂಜ್ ರಸ್ತೆ (ರಾಷ್ಟ್ರೀಯ ಹೆದ್ದಾರಿ-305) ಮತ್ತು ಅಮೃತಸರ–ಭೋಟಾ ರಸ್ತೆ (ರಾಷ್ಟ್ರೀಯ ಹೆದ್ದಾರಿ-503A) ಸೇರಿದಂತೆ ಒಟ್ಟು 503 ರಸ್ತೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ರಾಜ್ಯದಲ್ಲಿ 953 ವಿದ್ಯುತ್ ಪರಿವರ್ತಕಗಳು ಮತ್ತು 336 ನೀರು ಸರಬರಾಜು ಯೋಜನೆಗಳಿಗೆ ತೊಂದರೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (ಎಸ್‌ಇಒಸಿ) ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 20ರಿಂದ ಸೆಪ್ಟೆಂಬರ್ 12ರವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ 386 ಮಂದಿ ಮೃತಪಟ್ಟಿದ್ದಾರೆ. ಜತೆಗೆ, ಹಠಾತ್‌ ಪ್ರವಾಹ ಮತ್ತು ಭೂಕುಸಿತದ ಅವಘಡಗಳಿಂದ ₹4,465 ಕೋಟಿ ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಜೂನ್ 1ರಿಂದ ಸೆಪ್ಟೆಂಬರ್ 12ರವರೆಗೆ 96.72 ಸೆಂ.ಮೀ. ಸರಾಸರಿ ಮಳೆಯಾಗಿದ್ದು, ವಾಡಿಕೆಯಂತೆ ಶೇ 43ರಷ್ಟು ಅಧಿಕ ಪ್ರಮಾಣದ್ದಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.