ADVERTISEMENT

ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ: ಬಿಜೆಪಿ–ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2022, 4:37 IST
Last Updated 8 ಡಿಸೆಂಬರ್ 2022, 4:37 IST
   

ಶಿಮ್ಲಾ: ಆಡಳಿತಾರೂಢ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯುವ ಹಾದಿಯಲ್ಲಿದ್ದು, ಕಾಂಗ್ರೆಸ್‌ನಿಂದ ಪ್ರಬಲ ಪೈಪೋಟಿ ಎದುರಿಸುತ್ತಿದೆ. ಪ್ರಾರಂಭಿಕ ಸುತ್ತಿನ ಮತ ಎಣಿಕೆಯಲ್ಲಿ (10 ಗಂಟೆ) ಬಿಜೆಪಿ 33 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಕಾಂಗ್ರೆಸ್‌ 32 ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸಿದೆ. ಈಗಿನ ಮತ ಎಣಿಕೆ ಟ್ರೆಂಡ್‌ನಂತೆ ಇಬ್ಬರು ಪಕ್ಷೇತರರು ಗೆಲುವಿನ ಹಾದಿಯಲ್ಲಿದ್ದಾರೆ. ಒಂದು ಸ್ಥಾನ ಸಿಪಿಐ–ಎಂ ಪಾಲಾಗುವ ಸಾಧ್ಯತೆಯಿದೆ.


68 ಕ್ಷೇತ್ರಗಳಿರುವ ರಾಜ್ಯದಲ್ಲಿ ಅಧಿಕಾರ ಪಡೆಯಲು 35 ಸ್ಥಾನ ಗೆಲ್ಲಬೇಕಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನ ಗಳಿಸಿ ಸ್ಪಷ್ಟ ಬಹುಮತ ಪಡೆದಿತ್ತು. ಕಾಂಗ್ರೆಸ್‌ 21 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.


‌ಅಚ್ಚರಿಯೆಂಬಂತೆ ಕಾಂಗ್ರೆಸ್‌ ಮುಖಂಡ ರೋಹಿತ್‌ ಠಾಕೂರ್‌ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಸುರೇಶ್‌ ಭಾರಧ್ವಜ್‌ ಕೂಡ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಹಾಲಿ ಮುಖ್ಯಮಂತ್ರಿ ಜೈರಾಂ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಅನಿಲ್‌ ಶರ್ಮಾ, ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.