ADVERTISEMENT

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ: ಭೂಪಿಂದರ್ ಹೂಡಾ

ಪಿಟಿಐ
Published 8 ಡಿಸೆಂಬರ್ 2022, 8:35 IST
Last Updated 8 ಡಿಸೆಂಬರ್ 2022, 8:35 IST
ಭೂಪಿಂದರ್ ಹೂಡಾ
ಭೂಪಿಂದರ್ ಹೂಡಾ   

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೂತನ ಸರ್ಕಾರ ರಚಿಸಲಿದೆ ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಗುರುವಾರ ಹೇಳಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಜಯ ಗಳಿಸಿದ್ದು, 36ರಲ್ಲಿ ಮುನ್ನಡೆ ಸಾಧಿಸಿದೆ.

ಇದರೊಂದಿಗೆ 68 ಸದಸ್ಯ ಬಲದ ಹಿಮಾಚಲ ವಿಧಾನಸಭೆಯಲ್ಲಿ 40 ಸ್ಥಾನದೊಂದಿಗೆ, ಸರಳ ಬಹುಮತ ಕಾಯ್ದುಕೊಂಡಿದೆ.

ADVERTISEMENT

ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಗೆದ್ದು, 21ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನುಳಿದಂತೆ ಪಕ್ಷೇತರರು ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲದಲ್ಲಿ ಸರ್ಕಾರ ರಚನೆಯ ಕಾರ್ಯವನ್ನು ಕಾಂಗ್ರೆಸ್ ಈಗಾಗಲೇ ಆರಂಭಿಸಿದೆ.

ಛತ್ತೀಸಗಢ ಮುಖ್ಯಮುಂತ್ರಿ ಭೂಪೇಶ್ ಬಘೇಲ್ ಮತ್ತು ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಅವರೊಂದಿಗೆ ಶೀಘ್ರದಲ್ಲೇ ಶಿಮ್ಲಾಗೆ ತೆರಳುತ್ತೇನೆ ಎಂದು ಭೂಪಿಂದರ್ ಹೂಡಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.