ADVERTISEMENT

Himachal Pradesh: ದಿಢೀರ್ ಪ್ರವಾಹ; ಕೊಚ್ಚಿ ಹೋದ ಸೇತುವೆ, ಅಂಗಡಿ

ಪಿಟಿಐ
Published 19 ಆಗಸ್ಟ್ 2025, 7:33 IST
Last Updated 19 ಆಗಸ್ಟ್ 2025, 7:33 IST
<div class="paragraphs"><p>ಹಿಮಾಚಲ ಪ್ರದೇಶದಲ್ಲಿ ದಿಢೀರ್ ಪ್ರವಾಹ</p></div>

ಹಿಮಾಚಲ ಪ್ರದೇಶದಲ್ಲಿ ದಿಢೀರ್ ಪ್ರವಾಹ

   

(ಪಿಟಿಐ ಚಿತ್ರ)

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಕನಾನ್ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಒಂದು ಸೇತುವೆ ಹಾಗೂ ಮೂರು ಅಂಗಡಿಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ.

ADVERTISEMENT

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ವರದಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕುಲ್ಲು ಮತ್ತು ಬಂಜರ್ ಉಪವಿಭಾಗಗಳಲ್ಲಿ ಶಾಲೆಗಳು, ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಶಿಮ್ಲಾದ ರಾಮಚಂದ್ರ ಚೌಕ್ ಬಳಿಕ ಸೋಮವಾರ ತಡರಾತ್ರಿ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ 40 ಮಂದಿಯನ್ನು ರಕ್ಷಿಸಲಾಗಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಕಟ್ಟಡಗಳಿಗೆ ಹಾನಿಯಾಗಿದೆ. ಛೋಟಾ ಶಿಮ್ಲಾದಲ್ಲೂ ಮರಗಳು ನೆಳಕ್ಕೆ ಉರುಳಿವೆ.

ಕುಲ್ಲು ಮತ್ತು ಬಂಜರ್ ಪ್ರದೇಶಗಳಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ ಹಾಗೂ ಭೂಕುಸಿತಗಳು ವರದಿಯಾಗಿವೆ. ಇದರಿಂದಾಗಿ ಹಲವೆಡೆ ಹಾನಿ ಉಂಟಾಗಿದ್ದು, ರಸ್ತೆ ಸಂಚಾರಕ್ಕೆ ತೊಡಕಾಗಿವೆ.

ಜೂನ್ 20ರಂದು ಮುಂಗಾರು ಪ್ರಾರಂಭವಾದ ನಂತರ ಈವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ₹2,194 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 74 ದಿಢೀರ್ ಪ್ರವಾಹ, 36 ಮೇಘಸ್ಫೋಟ ಮತ್ತು 70 ಪ್ರಮುಖ ಭೂಕುಸಿತಗಳು ಉಂಟಾಗಿವೆ. 140 ಮಂದಿ ಮೃತಪಟ್ಟಿದ್ದು, 37 ಮಂದಿ ನಾಪತ್ತೆಯಾಗಿದ್ದಾರೆ. ಎರಡು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದಲ್ಲಿ ಒಟ್ಟಾರೆ 389 ರಸ್ತೆಗಳಲ್ಲಿ ಸಂಚಾರಕ್ಕೆ ತೊಡಕಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.