ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್ಸಿಎಸ್) ತಿಳಿಸಿದೆ.
ಬೆಳಗ್ಗೆ 5.17ಕ್ಕೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪನ ದಾಖಲಾಗಿದೆ.
ಧರ್ಮಶಾಲಾದಿಂದ 22 ಕಿ.ಮೀ. ಪೂರ್ವಕ್ಕೆ 5 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ ಎಂದು ಎನ್ಸಿಎಸ್ ಟ್ವೀಟ್ ತಿಳಿಸಿದೆ.
ಇದನ್ನೂ ಓದಿ: ಭೂಕುಸಿತ: ಜೋಶಿಮಠ ವಿಪತ್ತಿಗೆ ಪರಿಸರವಾದಿಗಳ ಕಳವಳ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.