ಚಿತ್ರ ಕೃಪೆ: ಪಿಟಿಐ
ಮನಾಲಿ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೀಕರ ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ರಸ್ತೆಗೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗಿದ್ದು, ಪಿಕಪ್ ವಾಹನ ಏಕಾಏಕಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಿವೆ. ಭೂಕುಸಿತದಿಂದಾಗಿ ಹಲವೆಡೆ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಿರಂತರ ಮಳೆಯಿಂದ ಮಂಡಿಯಲ್ಲಿ ಬಿಯಾಸ್ ನದಿ ಉಕ್ಕಿ ಹರಿಯುತ್ತಿವೆ. ಹೀಗಾಗಿ ಎರಡು ದಿನಗಳ ಕಾಲ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.