ಲಘು ಭೂಕಂಪ
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 9:18 ಕ್ಕೆ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಡಿ ಪ್ರದೇಶದಲ್ಲಿ 31.49 ಡಿಗ್ರಿ ಅಕ್ಷಾಂಶ ಮತ್ತು 76.94 ಡಿಗ್ರಿ ರೇಖಾಂಶದಲ್ಲಿ ಐದು ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಎಂದು ಅದು ತಿಳಿಸಿದೆ.
ರಾಜ್ಯದ ಯಾವುದೇ ಭಾಗದಲ್ಲಿ ಇಲ್ಲಿಯವರೆಗೆ ಯಾವುದೇ ಜೀವ ಮತ್ತು ಆಸ್ತಿಪಾಸ್ತಿ ನಷ್ಟ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಡಿ ಜಿಲ್ಲೆ ಭೂಕಂಪನ ವಲಯ 5 ರ ಅಡಿಯಲ್ಲಿ ಬರುತ್ತದೆ, ಇದು ಹೆಚ್ಚು ಹಾನಿ ಸಂಭವಿಸುವ ಅಪಾಯ ವಲಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.