
ಪಿಟಿಐ
ನಾಲಾಘಡ ಪೊಲೀಸ್ ಠಾಣೆಯ ಸಮೀಪ ಸ್ಫೋಟ ನಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ತನಿಖೆ ನಡೆಸಿದರು
– ಪಿಟಿಐ ಚಿತ್ರ
ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಾಲಾಘಡ ಪೊಲೀಸ್ ಠಾಣೆಯ ಬಳಿ ಗುರುವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಠಾಣೆಯ ಅಕ್ಕಪಕ್ಕದ ಕಟ್ಟಡಗಳ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಜತೆಗೆ 400ರಿಂದ 500 ಮೀಟರ್ ದೂರದವರೆಗೂ ಸ್ಫೋಟದ ಶಬ್ದ ಕೇಳಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಫೋಟಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ತಜ್ಞರ ತಂಡವು ಸ್ಥಳಕ್ಕೆ ಭೇಟಿ ನೀಡಿ, ಮಾದರಿಯನ್ನು ಕಲೆಹಾಕಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.