ಶಿಮ್ಲಾ: ತೀವ್ರ ಕುತೂಹಲ ಮೂಡಿಸಿದ್ದಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸಿದೆ.1985ರಿಂದ ಒಮ್ಮೆ ಗೆದ್ದ ಪಕ್ಷ ಮತ್ತೊಮ್ಮ ಅಧಿಕಾರಕ್ಕೇರದ ಕಣಿವೆ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ.
ಕಾಂಗ್ರೆಸ್‌ಗೆ 40 ಸ್ಥಾನಗಳಲ್ಲಿ ಜಯ...
ಚುನಾವಣಾ ಆಯೋಗದ ಮಾಹಿತಿ ಪ್ರಕಾರ 68 ಕ್ಷೇತ್ರಗಳಿರುವ ರಾಜ್ಯದಲ್ಲಿ ಕಾಂಗ್ರೆಸ್40 ಹಾಗೂಬಿಜೆಪಿ 25 ಕಡೆ ಜಯ ಸಾಧಿಸಿದೆ. ಪಕ್ಷೇತರರು 3 ಸ್ಥಾನಗಳನ್ನು ಗೆಲುವುಸಾಧಿಸಿದ್ದಾರೆ.
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ–2022
ಮತದಾನ...
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12ರಂದು ಮತದಾನ ನಡೆದಿತ್ತು. ಇಂದು (ಡಿ.8) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
2017ರಲ್ಲಿ ಏನಾಗಿತ್ತು?
ಕಳೆದ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಮತ್ತು ಇತರೆ 3 ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.
ಗೆದ್ದವರು
ಹಾಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಜೈರಾಂ ಠಾಕೂರ್ ಸೆರಜ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚೇತ್ ರಾಮ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯಿಂದ ಶಾಸಕರ ಖರೀದಿ ಆತಂಕದಲ್ಲಿ ಕಾಂಗ್ರೆಸ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವುದು ಬಹುತೇಕ ಖಚಿತವಾಗಿದೆ. 68 ಕ್ಷೇತ್ರಗಳ ಪೈಕಿ 39ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಪಡೆದಿದ್ದಾರೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮಧ್ಯೆ, ಕಾಂಗ್ರೆಸ್‌ಗೆ ಶಾಸಕರ ಖರೀದಿ ಆತಂಕ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಚುನಾವಣಾ ವೀಕ್ಷಕರಾದ ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಅವರ ಜೊತೆ ಭೂಪಿಂದರ್ ಸಿಂಗ್ ಹೂಡಾ, ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಸೇರಿದಂತೆ ಹಿರಿಯ ನಾಯಕರನ್ನು ಕಾಂಗ್ರೆಸ್ ಹೈಕಮಾಂಡ್ ಚಂಡೀಗಢಕ್ಕೆ ಕಳುಹಿಸಿದೆ.
ರಾಜೀನಾಮೆ ನೀಡುವುದಾಗಿ ಸಿಎಂ ಹೇಳಿಕೆ
ರಾಜ್ಯಪಾಲರಿಗೆ ರಾಜೀನಾಮೆ ನೀಡುವುದಾಗಿಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.
— ANI (@ANI) December 8, 2022
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವತ್ತ ಮುನ್ನಡೆದಿದೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಜನರು, ಪಕ್ಷದ ಕಾರ್ಯಕರ್ತರು,ನಾಯಕರುಗಳಿಗೆ ಧನ್ಯವಾದ ಹೇಳಿದ್ದಾರೆ.
ರಾಹುಲ್ ಧನ್ಯವಾದ
‘ಈ ವಿಜಯಕ್ಕೆ ಹಿಮಾಚಲ ಪ್ರದೇಶದ ಎಲ್ಲ ಮತದಾರರಿಗೆ ಹೃದಯ ಪೂರ್ವಕ ಧನ್ಯವಾದ ಹೇಳುತ್ತೇನೆ. ಕಾಂಗ್ರೆಸ್‌ನಎಲ್ಲ ಕಾರ್ಯಕರ್ತರು ಮತ್ತು ನಾಯಕರಿಗೆ ಶುಭಾಶಯ. ಈ ಜಯದ ಹಿಂದೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಇದೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
'ಚುನಾವಣೆ ಸಂದರ್ಭ ಜನರಿಗೆ ನೀಡಲಾದ ಎಲ್ಲ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸುತ್ತೇವೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ' ಎಂದೂ ತಿಳಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ಠಾಕೂರ್
ನಿರ್ಗಮಿತ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ರಾಜ್ಯಪಾಲ ಆರ್.ವಿ.ಅರಳೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.