ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.
ಕಿರುಕುಳದ ಬಗ್ಗೆ 8ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಬಳಿಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಶಿಕ್ಷಕನು ನಮ್ಮನ್ನು ಅನುಚಿತವಾಗಿ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ' ಎಂದು ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಲಿಖಿತ ದೂರು ಸಲ್ಲಿಸಿದ್ದರು. ಈ ದೂರನ್ನು ಶಾಲೆಯ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗೆ ರವಾನಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ವಿದ್ಯಾರ್ಥಿನಿಯರ ಪೋಷಕರ ಜತೆ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಅನೇಕ ಪೋಷಕರು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ನಮ್ಮ ಮಕ್ಕಳು ತಿಳಿಸಿಲ್ಲ ಎಂದು ಕಳವಳ ವ್ಯಕ್ತಪಡಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ ವಿವಿಧ ಸೆಕ್ಷನ್‌ಗಳ ಅಡಿಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.