ಶಿಮ್ಲಾ: ಕಳೆದ ವಾರ ಮಂಡಿ ಜಿಲ್ಲೆಯ ತುನಾಗ್, ಗೋಹರ್ ಮತ್ತು ಕರ್ಸೋಗ್ ಉಪವಿಭಾಗಗಳಲ್ಲಿ ಸಂಭವಿಸಿದ ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತದ ಬಳಿಕ ನಾಪತ್ತೆಯಾದ 30 ಜನರನ್ನು ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಡ್ರೋನ್‌ಗಳು ಮತ್ತು ಶ್ವಾನ ದಳದ ಸಹಾಯದಿಂದ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಸೇನೆ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಗೃಹರಕ್ಷಕ ದಳದ ಸುಮಾರು 250 ಸಿಬ್ಬಂದಿ ಸ್ಥಳೀಯರೊಂದಿಗೆ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇತ್ತೀಚಿನ ವರದಿಯ ಪ್ರಕಾರ 494 ಜನರನ್ನು ರಕ್ಷಿಸಲಾಗಿದೆ. ದುರಂತದಲ್ಲಿ ಸುಮಾರು 225 ಮನೆಗಳು, 7 ಅಂಗಡಿಗಳು, 243 ಕೊಟ್ಟಿಗೆಗಳು, 31 ವಾಹನಗಳು, 14 ಸೇತುವೆಗಳು ಮತ್ತು ಹಲವಾರು ರಸ್ತೆಗಳು ಹಾನಿಗೊಳಗಾಗಿವೆ. ಒಟ್ಟು 215 ಜಾನುವಾರುಗಳು ಸಾವನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.