ADVERTISEMENT

ಶಿಮ್ಲಾ; ಅತ್ಯಾಚಾರ ಎಸಗಿ ಆಕ್ಷೇಪಾರ್ಹ ಫೋಟೊ ತೆಗೆದ ಪ್ರಾಂಶುಪಾಲ: ಎಫ್‌ಐಆರ್‌

ಪಿಟಿಐ
Published 27 ಜೂನ್ 2025, 14:09 IST
Last Updated 27 ಜೂನ್ 2025, 14:09 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಶಿಮ್ಲಾ (ಹಿಮಾಚಲ ಪ್ರದೇಶ): ಶಿಮ್ಲಾದ ಥಿಯೋಗ್‌ನಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರ ವಿರುದ್ಧ ಮಹಿಳಾ ಸಹೋದ್ಯೋಗಿಯ ಮೇಲೆ ಅತ್ಯಾಚಾರ, ಬೆದರಿಕೆ ಹಾಗೂ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.

‘ಪ್ರಾಂಶುಪಾಲರು ಬಲವಂತವಾಗಿ ನನ್ನೊಂದಿಗೆ ದೈಹಿಕ ಸಂಬಂಧದಲ್ಲಿ ತೊಡಗಿಸಿಕೊಂಡಿದ್ದು, ಆಕ್ಷೇಪಾರ್ಹ ಫೋಟೊಗಳನ್ನು ತೆಗೆದಿದ್ದಾರೆ’ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

‘ಆಕ್ಷೇಪಾರ್ಹ ಫೋಟೊಗಳನ್ನಿಟ್ಟುಕೊಂಡು ಬೆದರಿಸುವ ಮೂಲಕ ಪ್ರಾಂಶುಪಾಲರು ನನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಮಾರ್ಚ್‌ 25ರಂದು ಇದನ್ನು ಪ್ರತಿರೋಧಿಸಿದ್ದಕ್ಕೆ ಬೆಲ್ಟ್‌ನಿಂದ ಹೊಡೆದಿದ್ದಾರೆ. ಮೇ 24ರಂದು ನಾನಿದ್ದ ಕೋಣೆಗೆ ನುಗ್ಗಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಪ್ರಾಂಶುಪಾಲರ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆದಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಸಂಜೀವ್‌ ಕುಮಾರ್‌ ಗಾಂಧಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.