ADVERTISEMENT

ಹಿಮಾಚಲ: ಮೊದಲ ಹಂತದಲ್ಲಿ 493 ಆಧುನಿಕ ಗ್ರಂಥಾಲಯಗಳ ಸ್ಥಾಪನೆ; ಸುಖು

ಪಿಟಿಐ
Published 1 ಡಿಸೆಂಬರ್ 2024, 10:48 IST
Last Updated 1 ಡಿಸೆಂಬರ್ 2024, 10:48 IST
<div class="paragraphs"><p>ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್ ಸುಖು</p></div>

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್ ಸುಖು

   

ಶಿಮ್ಲಾ: ರಾಜ್ಯದ ಜಿಲ್ಲೆಗಳು, ಉಪವಿಭಾಗಗಳು ಹಾಗೂ ಪಂಚಾಯತ್ ಮಟ್ಟದಲ್ಲಿ ಸುಧಾರಿತ ಸೌಲಭ್ಯಗಳನ್ನು ಹೊಂದಿರುವ ಆಧುನಿಕ ಗ್ರಂಥಾಲಯಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್ ಸುಖು ಹೇಳಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರಾಂಶುಪಾಲರ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮೊದಲ ಹಂತದಲ್ಲಿ 493 ಗ್ರಂಥಾಲಯಗಳನ್ನು ₹ 88 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ ಎಂದರು.

ADVERTISEMENT

ಗುಣಮಟ್ಟದ ಶಿಕ್ಷಣವಿಲ್ಲದಿರುವ ಪದವಿಗಳಿಗೆ ಯಾವುದೇ ಮೌಲ್ಯವಿಲ್ಲ ಎಂದು ಅವರು ಒತ್ತಿ ಹೇಳಿದ ಅವರು ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಶ್ರೇಯಾಂಕ ವ್ಯವಸ್ಥೆಯನ್ನು ಪರಿಚಯಿಸಿದ ಭಾರತದ ಮೊದಲ ರಾಜ್ಯವಾಗಿದೆ ಎಂದರು.

ಕಾಲೇಜು ಪ್ರಾಂಶುಪಾಲರ ಆರ್ಥಿಕ ಮತ್ತು ಆಡಳಿತಾತ್ಮಕ ಅಧಿಕಾರ ಹೆಚ್ಚಳ ಹಾಗೂ ಶಿಕ್ಷಣ ಇಲಾಖೆಯೊಳಗೆ ವಿಕೇಂದ್ರೀಕರಣ ಉತ್ತೇಜಿಸಲು ರಾಜ್ಯ ಸರ್ಕಾರ ಯೋಜಿಸಿದೆ ಎಂದು ಸುಖು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.